ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ವೀರಮಂಗಲದಲ್ಲಿ 2023- 24ನೇ ಸಾಲಿನಿಂದ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭವಾಗಲಿದೆ. ಈಗಾಗಲೇ ಕೇಂದ್ರ ಸರಕಾರ ಪ್ರಾಯೋಜಿತ ಪಿಎಂ ಶ್ರೀ ಯೋಜನೆಯಲ್ಲಿ ಆಯ್ಕೆಗೊಂಡ ವೀರಮಂಗಲ ಶಾಲೆಯ ಮುಂದಿನ ಶೈಕ್ಷಣಿಕ ಉದ್ದೇಶಕ್ಕಾಗಿ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಲಾಗುತ್ತಿದ್ದು, ಮೇ 31 ರಂದು ಬೆಳಿಗ್ಗೆ 10 ಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ರವರು LKG ತರಗತಿಯ ಉದ್ಘಾಟನೆಯನ್ನು ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸಮನ್ವಯಾಧಿಕಾರಿ ನವೀನ್ ಸ್ಟಿಫನ್ ವೇಗಸ್, ಗ್ರಾ. ಪಂ ಸದಸ್ಯರಾದ ಬಾಬು ಶೆಟ್ಟಿ, ವಸಂತಿ, ಪದ್ಮಾವತಿ, ಶಿಕ್ಷಣ ಸಂಯೋಜಕಿ ಅಮೃತಕಲಾ, ಸಿ ಆರ್ ಪಿ ಪರಮೇಶ್ವರಿ ಭಾಗವಹಿಸಲಿದ್ದಾರೆ. Lkg ಗೆ 25 ವಿದ್ಯಾರ್ಥಿಗಳು ಈಗಾಗಲೆ ದಾಖಲೆಗೊಂಡಿದ್ದು ಈ ಎಲ್ಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಕಿಟ್ಟನ್ನು ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನ ಆನಾಜೆ ವೀರಮಂಗಲ ಇವರು ನೀಡಲಿದ್ದಾರೆ ಎಂದು ಎಸ್ ಡಿ ಎಂ ಸಿ ಅಧ್ಯಕ್ಷೆ ಅನುಪಮಾ ಶಾಲಾ ಮುಖ್ಯಗುರು ತಾರಾನಾಥ ಸವಣೂರು ಇವರು ತಿಳಿಸಿದ್ದಾರೆ.