ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿ ನಿಗದಿಗೆ ಆದೇಶ

0

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಜೂನ್, ಜುಲೈನಲ್ಲಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಈ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅನ್ವಯ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಲಾಗಿದ್ದು ರಾಜ್ಯದ 5,948 ಗ್ರಾಮ ಪಂಚಾಯಿತಿಗಳಿಗೆ ತಾಲೂಕುವಾರು, ವರ್ಗವಾರು 2020ರಲ್ಲಿ ಚುನಾವಣೆ ನಡೆದ ನಂತರ ಎರಡನೇ ಅವಧಿ(30 ತಿಂಗಳ ಬಳಿಕ)ಗೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಲಾಗಿದೆ. ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗ ಹೀಗೆ ಎಲ್ಲ ವರ್ಗಗಳಿಗೂ ಮೀಸಲಾತಿ ನಿಗದಿಪಡಿಸುವ ಸಂಬಂಧ ಚುನಾವಣಾ ಆಯೋಗ ಮಾರ್ಗಸೂಚಿ ಹೊರಡಿಸಿದೆ. ಇದರನ್ವಯ ಆಯಾ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಆಧರಿಸಿ ಜಿಲ್ಲಾಧಿಕಾರಿಗಳು ಮೀಸಲು ನಿಗದಿ ಮಾಡಲಿದ್ದಾರೆ. ರಾಜ್ಯದಲ್ಲಿ ಇನ್ನು ಮುಂದೆ ಹೊಸದಾಗಿ ರಚಿತವಾಗುವ ಯಾವುದೇ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ರಾಜ್ಯ ಚುನಾವಣಾ ಆಯೋಗದ ಪೂರ್ವಾನುಮತಿ ಪಡೆದು ನಿರ್ಧರಿಸುವಂತೆಯೂ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here