





ಪುತ್ತೂರು: ಪುತ್ತೂರು ಕ್ಷೇತ್ರದ ಬಗ್ಗೆ ಅವಲೋಕನ ಸಭೆ ನಡೆಯಲಿದೆ. ಅಲ್ಲಿ ಎಲ್ಲವನ್ನೂ ಚರ್ಚಿಸಲಾಗುವುದು. ಪ್ರಜಾಪ್ರಭುತ್ವದಲ್ಲಿ ಯಾರೂ ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ಪುತ್ತಿಲ ಬಗ್ಗೆ ಗೌರವವಿದ್ದು, ಸಂಘದ ಮತ್ತು ಪಕ್ಷದ ಒಳಗಿನ ಎಲ್ಲವನ್ನೂ ಸರಿ ಮಾಡುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.



ಮಂಗಳೂರಿನಲ್ಲಿ ಜಿಲ್ಲೆಯ 6 ಶಾಸಕರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪುತ್ತೂರಿನಲ್ಲಿ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಖಂಡಿಸಿದ್ದೇನೆ, ಬ್ಯಾನರ್ ಹಾಕಿದವರ ವಿರುದ್ದ ನಾವು ದೂರು ಕೊಟ್ಟಿಲ್ಲ, ಪೊಲೀಸರಿಗೂ ಒತ್ತಡ ಹಾಕಿಲ್ಲ, ಕಾಂಗ್ರೆಸ್ ನವರು ಹಾಕಿರಬಹುದು ಎಂದು ಹೇಳಿದ್ದಾರೆ. ರಾಜಕೀಯದಲ್ಲಿ ಟೀಕೆಗಳು ಸಹಜ. ನಾವು ಟೀಕೆಗಳನ್ನು ಸ್ವಾಗತಿಸುವುದಾಗಿ ಕಟೀಲ್ ಹೇಳಿದ್ದಾರೆ.





ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ









