ಕೋಡಿಂಬಾಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ದಿನ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ರಾಮಚಂದ್ರ ಪೂಜಾರಿ ಶಾಂತಿನಗರ ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಪ್ರಭಾರ ಮುಖ್ಯಗುರು ಪುಷ್ಪಾವತಿ ಕೆ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಬರಮೇಲು ಮತ್ತು ಶಾಲಾ ಗೌರವ ಶಿಕ್ಷಕಿ ಅಶ್ವಿತ ಶುಭ ಕೋರಿದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಅಣ್ಣು ಸ್ವಾಗತಿಸಿ ಗ್ರಂಥಾಲಯದ ಮೇಲ್ವಿಚಾರಕಿ ಕುಸುಮಾ ವಿ. ರೈ ವಂದಿಸಿದರು.


ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳಿಗೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಪ್ರಭಾರ ಮುಖ್ಯಗುರು ಪುಷ್ಪಾವತಿ ಮತ್ತು ಗೌರವ ಶಿಕ್ಷಕಿ ಅಶ್ವಿತ ವಿವಿಧ ಚಟುವಟಿಕೆಗಳ ನಿರ್ವಹಿಸುವುದರ ಮೂಲಕ ಮಕ್ಕಳಿಗೆ ತರಬೇತಿ ನೀಡಿದರು. 2ನೇ ದಿನದ ಶಿಬಿರಕ್ಕೆ ಗ್ರಾ.ಪಂ. ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ ಶಾಂತಿನಗರ, ಸದಸ್ಯ ರಾಮಣ್ಣ ಗೌಡ ಗುಂಡೋಲೆ, ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ ಭೇಟಿ ನೀಡಿ ಶುಭ ಹಾರೈಸಿದರು. ಗ್ರಾ.ಪಂ. ಮತ್ತು ಗ್ರಂಥಾಲಯದ ವತಿಯಿಂದ ಮಕ್ಕಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

3ನೇ ದಿನದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಸಕ್ತಾ ರೈ ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ಕುಸುಮಾ ವಿ. ರೈ ತರಬೇತಿ ನೀಡಿದರು. 4ನೇ ದಿನದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರುತಿ ವಿಸ್ಮಿತ್ ಯಕ್ಷನ೦ದನ ಕಲಾ ಸಂಘ ಗೋಕುಲನಗರ ಕೊಯಿಲ ಹಾಗೂ ನಿಶ್ಮಿತಾ ದೀಕ್ಷಿತ್ ಸೈಂಟ್ ಮೇರಿಸ್ ಇಂಗ್ಲೀಷ್ ಮಾಧ್ಯಮ ಶಾಲೆ ಉಪ್ಪಿನಂಗಡಿ ಇವರು ಮಕ್ಕಳಿಗೆ ತರಬೇತಿ ನೀಡಿದರು. ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. 5ನೇ ದಿನದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗುರುವಾಯನಕೆರೆ ಸ.ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ಜಯಶ್ರೀ ಭಜನೆ, ಜಾನಪದ, ಹಾಗೂ ವಿವಿಧ ಚಟುವಟಿಕೆಗಳ ತರಬೇತಿ ನೀಡಿದರು. ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. 6ನೇ ದಿನದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೋಡಿಂಬಾಡಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವಿಜಯ ಪ್ರಭು ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಎಸ್‌ಡಿಎಂಸಿ ಮಾಜಿ ಅಧ್ಯಕ್ಷೆ ರಾಧಿಕಾ ಆರ್. ಸಾಮ೦ತ್ ನೆಕ್ಕರಾಜೆಯವರು ಉಪಹಾರದ ವ್ಯವಸ್ಥೆ ಮಾಡಿದ್ದರು. 7ನೇ ದಿನದ ಶಿಬಿರದಲ್ಲಿ ಜೀವಿತ ಹಾಗೂ ಶ್ರೇಯಾರವರು ಮಕ್ಕಳಿಗೆ ಕ್ರಾಫ್ಟ್ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಆರೋಗ್ಯ ಕಾರ್ಯಕರ್ತೆ ಸಿ.ಎಮ್. ಶೀಲಾ ಮಕ್ಕಳಿಗೆ ಆರೋಗ್ಯ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ಮೋಹಿನಿ ಜನಾರ್ದನ ಗೌಡ ಕೋಡಿ, ಶಾಲಾ ಮುಖ್ಯಗುರು ಪುಷ್ಪಾವತಿ, ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ, ಉಪಾಧ್ಯಕ್ಷ ಸುರೇಶ್ ಶೆಟ್ಟಿ ಬರಮೇಲು, ಪಿಡಿಓ ರೋಹಿತಾಶ್ವ, ಸಂಜೀವಿನಿ ಒಕ್ಕೂಟದ ಮುಖ್ಯ ಬರಹಗಾರರಾದ ಸಂಧ್ಯಾ ರಾಮಚಂದ್ರ ಗೌಡ ಕೈಲಾಜೆ, ಪುನರ್ವಸತಿ ಕಾರ್ಯಕರ್ತೆ ಲೀಲಾವತಿ, ತಾ.ಪಂ. ಮಾಜಿ ಸದಸ್ಯೆ ಲೀಲಾವತಿ ಲಕ್ಷ್ಮಣ ಗೌಡ, ನಿವೃತ್ತ ಶಿಕ್ಷಕಿ ಲಕ್ಷ್ಮಿ ಆರ್. ರೈ, ಯಮುನಾ ಡೆಕ್ಕಾಜೆ ಉಪಸ್ಥಿತರಿದ್ದರು. ಗ್ರಾ.ಪಂ. ಕಾರ್ಯದರ್ಶಿ ಅಣ್ಣು ಸ್ವಾಗತಿಸಿ ವಂದಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಕುಸಮಾ ವಿ.ರೈ ಕಾರ್ಯಕ್ರಮ ನಿರೂಪಿಸಿದರು. ಏಳು ದಿನದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಕುಸುಮಾ ವಿ.‌ರೈ ಊಟದ ವ್ಯವಸ್ಥೆ ಮಾಡಿದ್ದರು.‌

LEAVE A REPLY

Please enter your comment!
Please enter your name here