ಪ್ರವೀಣ್‌ ನೆಟ್ಟಾರ್ ಪತ್ನಿಗೆ ರಾಜ್ಯ ಸರ್ಕಾರ ಉದ್ಯೋಗ ನೀಡದಿದ್ದರೆ ಕೇಂದ್ರದ ಎನ್ಎಂಪಿಎಯಲ್ಲಿ ಉದ್ಯೋಗ ನೀಡುತ್ತೇವೆ – ನಳಿನ್ ಕುಮಾರ್ ಕಟೀಲ್

0

ಪುತ್ತೂರು: ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನವಾದರೂ ಜಾರಿಗೆ ಮಾಡಿಲ್ಲ. ಸರಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಬಿಲ್ಲಿ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ ಎಂದು ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.‌

ಜಿಲ್ಲೆಯ ಆರು ಶಾಸಕರೊಂದಿಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗಿದೆ. ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಿದೆ. ಕಾರ್ಯಕರ್ತರನ್ನು ಬಿಟ್ಟು ಹಲ್ಲೆ,ಹತ್ಯೆ ಮಾಡುತ್ತಿದೆ. ತಾಕತ್ ಇದ್ರೆ ಪಾಕ್ ಪರ ಜೈಕಾರ ಹಾಕಿದವರನ್ನು ಬಂಧಿಸಲಿ ಎಂದ ಅವರು ಪ್ರವೀಣ್ ನೆಟ್ವರ್ ಪತ್ನಿಗೆ ನೀಡಿದ ಉದ್ಯೋಗವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎಂದು ಆರೋಪಿಸಿದರು. ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡುವಂತೆ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ ಕಟೀಲ್ ರಾಜ್ಯ ಸರ್ಕಾರ ಉದ್ಯೋಗ ನೀಡದಿದ್ದಲ್ಲಿ ಕೇಂದ್ರದ ಎನ್ಎಂಪಿಎಯಲ್ಲಿ ಉದ್ಯೋಗ ನೀಡುವುದಾಗಿ ಹೇಳಿದರು.

LEAVE A REPLY

Please enter your comment!
Please enter your name here