ಪ್ರವೀಣ್ ನೆಟ್ಟಾರು ಪತ್ನಿ ಹುದ್ದೆಗೆ ಮರುನೇಮಕ-ಸಿಎಂ

0

ಬೆಂಗಳೂರು:ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಸರಕಾರ ಬದಲಾದ ಬಳಿಕ ಸೇವೆಯಿಂದ ವಜಾಗೊಂಡಿದ್ದ, ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರನ್ನು ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

`ಹೊಸ ಸರಕಾರ ಬಂದ ನಂತರ ಹಿಂದಿನ ಸರಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ.ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ,ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ.ಇದರಲ್ಲಿ ಸರಕಾರದ ಯಾವುದೇ ಹಸ್ತಕ್ಷೇಪವಿಲ್ಲ.

ಪ್ರವೀಣ್ ನೆಟ್ಟಾರು ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here