ಇಚ್ಲಂಪಾಡಿ: ಕಾಡಾನೆ ದಾಳಿ-ವ್ಯಕ್ತಿಗೆ ಗಾಯ

0

ನೆಲ್ಯಾಡಿ: ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಮೇ.28ರಂದು ಮಧ್ಯಾಹ್ನ ನಡೆದಿದೆ.

ಇಚ್ಲಂಪಾಡಿ ನಿವಾಸಿ ವಿಜುಕುಮಾರ್ ಕಾಡಾನೆ ದಾಳಿಯಿಂದ ಗಾಯಗೊಂಡವರಾಗಿದ್ದಾರೆ. ಇವರು ಮಧ್ಯಾಹ್ನ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಇಚ್ಲಂಪಾಡಿ ಗ್ರಾಮದ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಗಂಭೀರ ಗಾಯಗೊಂಡಿರುವ ವಿಜುಕುಮಾರ್ ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಪುತ್ತೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here