ನೆಲ್ಯಾಡಿ: ಕಳೆದ 36 ವರ್ಷಗಳಿಂದ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತರಾಗಿ, ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿರುವ ಸೆಬಾಸ್ಟಿಯನ್ ಪಿ.ಜೆ.ಅವರು ಮೇ 31ರಂದು ನಿವೃತ್ತರಾಗಲಿದ್ದಾರೆ.
ಇವರು 27-9-1987ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡಿದ್ದರು. ಆ ಬಳಿಕ ಗೋಳಿತ್ತೊಟ್ಟು, ನೆಲ್ಯಾಡಿ ಶಾಖೆಗಳಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿದ್ದರು. 2013ರಲ್ಲಿ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿ ಸಂಘದ ನೆಲ್ಯಾಡಿ ಕೇಂದ್ರ ಕಚೇರಿ, ಗೋಳಿತ್ತೊಟ್ಟು ಹಾಗೂ ಶಿರಾಡಿ ಶಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗೋಳಿತ್ತೊಟ್ಟು ಶಾಖೆಯಲ್ಲಿ ವ್ಯವಸ್ಥಾಪಕರಾಗಿದ್ದು ಮೇ 31ರಂದು ನಿವೃತ್ತಿಯಾಗಲಿದ್ದಾರೆ.
ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪುಚ್ಚೇರಿ ದಿ.ಜೋನ್ ಪಿ.ಟಿ ಹಾಗೂ ಮೇರಿಕುಟ್ಟಿ ಪುತ್ರರಾದ ಸೆಬಾಸ್ಟಿಯನ್‌ರವರು ಪುಚ್ಚೇರಿ ಮತ್ತು ನೆಲ್ಯಾಡಿ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಪಡೆದುಕೊಂಡಿದ್ದಾರೆ. ಇವರು ಪತ್ನಿ ಲಿಸ್ಸಮ್ಮ ಅವರೊಂದಿಗೆ ಪುಚ್ಚೇರಿಯಲ್ಲಿ ವಾಸ್ತವ್ಯವಿದ್ದಾರೆ. ಸೆಬಾಸ್ಟಿಯನ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದೇರಿ ಒಕ್ಕೂಟದ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಇವರು ಯೋಜನೆಯ ನೆಲ್ಯಾಡಿ ವಲಯದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.