ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಎಸ್.ಐ ಲೋಕನಾಥ್ ಅವರು ಮೇ .31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
1992ರಲ್ಲಿ ಪೊಲೀಸ್ ಕೆಲಸಕ್ಕೆ ಆಯ್ಕೆಗೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಹಾಜರಾದ ಬಳಿಕ ಮುಲ್ಕಿ, ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ 2008ರಲ್ಲಿ ಹೆಡ್‌ಕಾನ್‌ಸ್ಟೇಬಲ್ ಅಗಿ ಪದೋನ್ನತಿ ಹೊಂದಿ ವೇಣೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಮುಂದೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು 2016ರಲ್ಲಿ ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ತನ್ನ ಕರ್ತವ್ಯದ ಸುಧೀರ್ಘ 31 ವರ್ಷಗಳ ಅವಧಿಯಲ್ಲಿ ಪ್ರಾಮಾಣಿಕತೆಯನ್ನು ಮೆರೆದಿದ್ದ ಅವರು ಸಾರ್ವಜನಿಕರಿಂದ ಪ್ರಶಂಸೆಗೊಳಪಟ್ಟಿದ್ದರು. ಲೋಕನಾಥ್ ಮೂಲತಃ ಪಂಜ ಹೋಬಳಿಯ ಕೂತ್ಕುಂಜ ಗ್ರಾಮದ ಕುದ್ವ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರು ಕೆಮ್ಮಿಂಜೆ ಗ್ರಾಮದ ಕಾಡಮನೆ ಎಂಬಲ್ಲಿ ಪತ್ನಿ ಜಯ ಲೋಕನಾಥ್, ಪುತ್ರ ಅಖಿಲೇಶ್ ಕೆ.ಎಲ್, ಪುತ್ರಿ ಅಕ್ಷಯ ಕೆ.ಎಲ್ ಅವರೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.