‘ಭ್ರಷ್ಟಾಚಾರ ಯಾರೇ ಮಾಡಿರಲಿ ನಿರ್ದಾಕ್ಷಿಣ್ಯ ಕಾನೂನು ಕ್ರಮ’ : ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

0

ಬೆಂಗಳೂರು: ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೋ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಾನು ಆರನೇ ಗ್ಯಾರಂಟಿ ನೀಡಿದ್ದೆ. ಅದರಂತೆ ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೋ ಅವರ ಮೇಲೆ ಸಂವಿಧಾನದ ಅಡಿಯಲ್ಲಿ, ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ‘ಏಏಖಆಃ ಅನುದಾನದಲ್ಲಿ ಖಾಸಗಿ ಪ್ರವಾಸ ಕೈಗೊಂಡವರ ಬಗ್ಗೆ 12-12-2022ರಂದು ಹಿಂದಿನ ಸರ್ಕಾರಕ್ಕೆ ಪತ್ರ ಬರೆದು ತನಿಖೆ ನಡೆಸಲು ಆಗ್ರಹಿಸಲಾಗಿತ್ತು. ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ 431 ಕೋಟಿ ಅವ್ಯವಹಾರದ ಬಗ್ಗೆ 1-6-2022ರಂದು ಪತ್ರ ಬರೆಯಲಾಗಿತ್ತು. ನೂತನ ಸರ್ಕಾರ ಬಂದ ನಂತರ, ಹಿಂದಿನ ಮುಖ್ಯಮಂತ್ರಿಗಳಿಗೆ ಬರೆದಿದ್ದ ಪತ್ರಗಳನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದ ನಂತರ ತಕ್ಷಣ ತನಿಖೆಗೆ ಆದೇಶ ನೀಡಿರುವುದು ಸ್ವಾಗತಾರ್ಹ ಎಂದರು. ಭ್ರಷ್ಟಾಚಾರದಲ್ಲಿ ಯಾರೇ ಮುಳುಗಿದ್ದರು ಸಹ ನಮ್ಮ ಕಾಂಗ್ರೆಸ್ ಸರ್ಕಾರವು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಖಗೆ೯ ಹೇಳಿದ್ದಾರೆ.

LEAVE A REPLY

Please enter your comment!
Please enter your name here