ಜೂ.1- ಮಾಣಿ ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವೆಲ್ ಕಮ್ ಡೇ- ಬಹುಮಾನ ವಿತರಣೆ ಕಾರ್ಯಕ್ರಮ

0

ವಿಟ್ಲ: ಮಾಣಿ ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆಯ ಸಭಾಭವನದಲ್ಲಿ ಜೂ.1ರಂದು ವೆಲ್ ಕಮ್ ಡೇ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ ಶಾಲೆಯ ಹಳೆ ಕಟ್ಟಡದ ಬಳಿಯಿಂದ ಹೊಸಕಟ್ಟಡದ ವರೆಗೆ ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಲಿದೆ.
ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ ಪ್ರಹ್ಲಾದ ಜೆ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರಿನ ಶಕ್ತಿ ಎಜ್ಯುಜೇಶನಲ್ ಟ್ರಸ್ಟ್ ನ ಸ್ಥಾಪಕರಾದ ಡಾ.ಕೆ.ಸಿ.ನಾಯ್ಕ್, ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ವಿಶ್ರಾಂತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಎಂ., ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ರೋಹಿಣಿ, ಮಾಣಿ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಆಳ್ವ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಜ್ಞಾನೇಶ್ ಗೌರವ ಉಪಸ್ಥಿತರಿರಲಿದ್ದಾರೆ‌. ಅಪರಾಹ್ನ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪೆರಾಜೆ ಗ್ರಾ.ಪಂ. ಪಿಡಿಒ ಸುನಿಲ್ ಕುಮಾರ್, ಬ್ಯಾಂಕ್ ಆಫ್ ಬರೋಡಾ ಮಾಣಿ ಶಾಖೆಯ ಶಾಖಾ ವ್ಯವಸ್ಥಾಪಕ ಶ್ಯಾಮ್ ಸ್ವರೂಪ್ ಕೆ., ಪಾಳ್ಯ ಟಿ.ಎಸ್. ಸಚ್ಚಿದಾನಂದ ರೈ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಮತ್ತು ಬಾಲವಿಕಾಸ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here