ಹಾರಾಡಿ-ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಮತ್ತು ನೂತನ ಶಾಲಾ ಕಟ್ಟಡ ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ

0

ಪುತ್ತೂರು: ನಗರದ ಹಾರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಇಂದು ನಡೆಯಿತು.

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ಉದ್ಘಾಟನೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು ಮಕ್ಕಳಿಗೆ ಶುಭ ಹಾರೈಸಿ, ಸರಕಾರದ ಸಿಗುವಂತಹ ಸೌಲಭ್ಯಗಳನ್ನು ಆದ್ಯತೆ ನೆಲೆಯಲ್ಲಿ ದೊರಕಿಸಲು ಪ್ರಯತ್ನ ಪಡುವುದಾಗಿ ಹೇಳಿದರು. ಈ ಭಾಗದ ಮಕ್ಕಳು ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಐಎಎಸ್ ಮತ್ತು ಐಪಿಎಸ್‌ ಗೆ ಸೇರುವಂತಾಗಬೇಕು ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಅಧಿಕಾರಿಗಳು, ಅಧ್ಯಾಪಕವೃಂದ, ವಿದ್ಯಾರ್ಥಿಗಳು, ಪೋಷಕರು, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಾಲೆಗೆ ಆಗಮಿಸಿದ ಮಕ್ಕಳನ್ನು ಪುಷ್ಪ ವರ್ಷದೊಂದಿಗೆ ಸ್ವಾಗತಿಸಲಾಯಿತು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here