ಮುರುಳ್ಯ ಗ್ರಾಮ ಪಂಚಾಯತ್‌ಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಕಾಣಿಯೂರು: ಮುರುಳ್ಯ ಗ್ರಾಮ ಪಂಚಾಯತ್ ಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಗ್ರಾ.ಪಂ.ಗೆ ಆಗಮಿಸಿದ ಶಾಸಕರನ್ನು ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಎಸ್, ಉಪಾಧ್ಯಕ್ಷೆ ವನಿತಾ ಸುವರ್ಣ ಬಾಮೂಲೆ, ಸದಸ್ಯರಾದ ಮೋನಪ್ಪ ಗೌಡ ಅಲೇಕಿ,ಕರುಣಾಕರ ಗೌಡ ಹುದೇರಿ, ಸುಂದರ ಗೌಡ ಶೇರ, ಶೀಲಾವತಿ ಗೋಳ್ತಿಲ, ಪುಷ್ಪಾಲತಾ ಕುಕ್ಕಟ್ಟೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ, ಕಾರ್ಯದರ್ಶಿ ಸೀತಾರಾಮ ಎಸ್, ಕೇರ್ಪಡ ಮಹಿಷಮರ್ದಿನಿ ದೇವಸ್ಥಾನದ ಅಧ್ಯಕ್ಷ ವಸಂತ ನಡುಬೈಲು, ಸದಸ್ಯರಾದ ರೂಪರಾಜ್ ರೈ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಊರ್ಸಾಗು, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷೆ ಕುಸುಮಾವತಿ ರೈ ಮತ್ತಿತರರು ಭಾಗವಹಿಸಿದರು. ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಸ್ವಾಗತಿಸಿ, ರಂಜಿನಿ ಪ್ರಾರ್ಥಿಸಿದರು. ಸಿಬ್ಬಂದಿ ಪ್ರದೀಪ್ ಎಣ್ಮೂರು ವಂದಿಸಿದರು. ಕಾರ್ಯದರ್ಶಿ ಸೀತಾರಾಮ ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here