ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಗೆ 98%

0

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು 98% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ.

ಇದೇ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 298 ವಿದ್ಯಾರ್ಥಿಗಳು ಹಾಜರಾಗಿದ್ದು, 282 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-99.2%, ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್-98.7%, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-98.1% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ-92.5% ಫಲಿತಾಂಶವನ್ನು ದಾಖಲಿಸಿವೆ.

ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.
ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here