ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ    

0

ನಿಡ್ಪಳ್ಳಿ; ಇಲ್ಲಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷೆ ಗೀತಾ.ಡಿ ಯವರ ಅಧ್ಯಕ್ಷತೆಯಲ್ಲಿ ಮೆ.31 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ ಇಲಾಖೆಯಿಂದ ಬಂದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.

ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಸದಸ್ಯರಾದ ಅವಿನಾಶ್ ರೈ, ಬಾಲಚಂದ್ರ ಕೆ, ನಂದಿನಿ ಆರ್.ರೈ, ಗ್ರೇಟಾ ಡಿ ಸೋಜಾ, ತುಳಸಿ, ಸೀತಾ ಉಪಸ್ಥಿತರಿದ್ದರು.ಆರೋಗ್ಯ ಕಾರ್ಯಕರ್ತೆ ಕುಸುಮಾವತಿ ಡೆಂಗ್ಯೂ ರೋಗದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮತ್ತು ಸ್ವಚ್ಚತೆ ಬಗ್ಗೆ ಮಾಹಿತಿ ನೀಡಿದರು. ಪಿಡಿಒ ಸಂಧ್ಯಾಲಕ್ಷ್ಮಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here