ಪಾಣಾಜೆ ಸುಬೋಧ ಪ್ರೌಢಶಾಲೆ ಪ್ರಾರಂಭೋತ್ಸವ

0

ನಿಡ್ಪಳ್ಳಿ;ಪಾಣಾಜೆ ಸುಬೋಧ ಪ್ರೌಢಶಾಲಾ 2023-2024 ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವವು ಮೆ.31 ರಂದು ಜರಗಿತು. ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ಟರ ಅಧ್ಯಕ್ಷತೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 ಮುಖ್ಯ ಶಿಕ್ಷಕ ಶ್ರೀಪತಿ ಭಟ್. ಐ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್. ಪಿ ಶಾಲೆಯ ಶಿಸ್ತಿನ ಬಗ್ಗೆ ತಿಳಿ ಹೇಳಿದರು. ಶಾಲೆಯ ಎಲ್ಲಾ ಮಕ್ಕಳಿಗೆ ಸಂಚಾಲಕರು ಕೊಡುಗೆ ನೀಡಿದ ಪೆನ್ನು ಮತ್ತು ಶಿಕ್ಷಕರು ನೀಡಿದ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು.

    ವಿದ್ಯಾರ್ಥಿಗಳಾದ ತೃಪ್ತಿ, ತನ್ವಿ ಎ.ಕೆ  ಗ್ರೀಷ್ಮ ಎ, ಚೈತನ್ಯ ಜಿ ಪ್ರಾರ್ಥಿಸಿ ಸಹ ಶಿಕ್ಷಕಿ ನಿರ್ಮಲ ವಂದಿಸಿದರು. ಹೆತ್ತವರು,ಪೋಷಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here