ನಿಡ್ಪಳ್ಳಿ; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,ತಾಲೂಕು ಪಂಚಾಯತ್ ಪುತ್ತೂರು , ನಿಡ್ಪಳ್ಳಿ ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ,ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಅಮೃತ ಯೋಜನೆಯಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳಿಗೆ ಗ್ರಾಮ ಆರೋಗ್ಯ- ಆರೋಗ್ಯ ತಪಾಸಣಾ ಶಿಬಿರ ಮೆ.31 ರಂದು ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳ ರಕ್ತದೊತ್ತಡ ಮತ್ತು ಮಧುಮೇಹದ ಬಗ್ಗೆ ತಪಾಸಣೆ ನಡೆಸಲಾಯಿತು.
ಪ್ರತಿ ಫಲಾನುಭವಿಗಳು ಇದರ ಪ್ರಯೋಜನ ಪಡೆದು ಕೊಳ್ಳುವ ನಿಟ್ಟಿನಲ್ಲಿ ಗ್ರಾಮದ ಕೆಲವು ನಿರ್ದಿಷ್ಟ ಸ್ಥಳದಲ್ಲಿ ಶಿಬಿರ ನಡೆಯಲಿದೆ ಎಂದು ಹಿರಿಯ ಆರೋಗ್ಯ ಕಾರ್ಯಕರ್ತೆ ಕುಸುಮಾವತಿ ತಿಳಿಸಿದರು.
ಸಮುದಾಯ ಆರೋಗ್ಯ ಅಧಿಕಾರಿ ಲಕ್ಷ್ಮೀ, ಆರೋಗ್ಯ ಕಾರ್ಯಕರ್ತೆ ಕುಸುಮಾವತಿ ತಪಾಸಣೆ ಮಾಡಿದರು. ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ, ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಪಿಡಿಒ ಸಂಧ್ಯಾಲಕ್ಷ್ಮೀ,ಆಶಾ ಕಾರ್ಯಕರ್ತೆಯರಾದ ಪವಿತ್ರ, ದಿವ್ಯಾ ಸಿ.ಎಚ್, ಗೀತಾ.ಕೆ, ಸುಮತಿ, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಶಿಬಿರದ ಫಲಾನುಭವಿಗಳು ಉಪಸ್ಥಿತರಿದ್ದರು.