ಪುತ್ತೂರು: ಜೂನ್.3‌ಕ್ಕೆ ಕಾಂಗ್ರೆಸ್‌ ವಿಜಯೋತ್ಸವ

0

ಸಾರ್ವಜನಿಕರಿಗೆ ತೊಂದರೆಯಾಗುವ ಕಾರಣಕ್ಕೆ ಅದ್ದೂರಿ ವಿಜಯೋತ್ಸವ ಮೆರವಣಿಗೆ ರದ್ದು


ಜೂ. 3 ರಂದು ಪುರಭವನದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ: ಶಾಸಕ ಅಶೋಕ್ ರೈ
ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಂಭ್ರಮವನ್ನು ಅದ್ದೂರಿಯಾಗಿ ನಡೆಸಲು ಈ ಹಿಂದೆ ತೀರ್ಮಾನ ಮಾಡಿದ್ದು ಅದನ್ನು ರದ್ದು ಮಾಡಲಾಗಿದ್ದು ಯಾವುದೇ ಮೆರವನಣಿಗೆ ಇಲ್ಲದೆ ಜೂ. 3 ರಂದು ಶನಿವಾರ ಪುತ್ತೂರಿನ ಪುರಭವನದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.


ಕಾರ್ಯಕರ್ತರ ಅಪೇಕ್ಷೆಯಂತೆ ಸುಮಾರು 15 ರಿಂದ 20 ಸಾವಿರ ಕಾರ್ಯಕರ್ತರ ದೊಡ್ಡ ಮಟ್ಟದ ವಿಜಯೋತ್ಸವ ಮೆರವಣಿಗೆ ಮಾಡಬೇಕೆಂಬ ತೀರ್ಮಾನವನ್ನು ಮಾಡಿದ್ದೆವು ಆದರೆ ಅಷ್ಟೊಂದು ಮಂದಿಯ ಮೆರವಣಿಗೆ ಮಾಡುವಾಗ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಮತ್ತು ರಸ್ತೆ ಬ್ಲಾಕ್ ಆಗಿ ವಾಹನ ಸಂಚಾರಕ್ಕೂ ಅಡಚಣೆಯಾಗುತ್ತದೆ ಎಂಬ ಕಾರಣಕ್ಕೆ ನಾವು ಪಕ್ಷದ ಮುಖಂಡರ ತೀರ್ಮಾನದಂತೆ ರ್‍ಯಾಲಿಯನ್ನು ರದ್ದು ಮಾಡಿದ್ದೇವೆ. ಕಾಂಗ್ರೆಸ್‌ನಿಂದಾಗಿ ಯಾವುದೇ ವ್ಯಕ್ತಿಗೂ ತೊಂದರೆಯಾಗಬಾರದು. ಶಾಲೆ ಪ್ರಾರಂಭವಾಗಿದೆ ಮಕ್ಕಳು ಶಾಲೆ ಬಿಟ್ಟು ಮನೆಗೆ ತೆರಳುವ ವೇಳೆ ರೋಡ್ ಬ್ಲಾಕ್ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಪಟಾಕಿ ಸಿಡಿಸಿದರೂ ಜನರಿಗೆ ತೊಂದರೆಯಾಗುತ್ತದೆ. ಮೆರವಣಿಗೆಯ ವೇಳೆ ನೀರು ಕುಡಿದು ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಮೆರವಣಿಗೆಯನ್ನು ಕೈ ಬಿಡಲಾಗಿದೆ ಎಂದು ಶಾಸಕರು ತಿಳಿಸಿದರು. ಕಾಂಗ್ರೆಸ್ ನಿಂದಾಗಿ ಪುತ್ತೂರಿನ ಯಾರಿಗೂ ತೊಂದರೆಯಾಗಬಾರದು ಮತ್ತು ಯಾರ ಮನಸ್ಸಿಗೂ ನೋವಾಗಬಾರದು ಎಂಬ ಕಾರಣಕ್ಕೆ ಪಕ್ಷದ ಮುಖಂಡರೆಲ್ಲರೂ ಸೇರಿ ಈ ತೀರ್ಮಾನಕ್ಕೆ ಬಂದಿದ್ದೇವೆ. ಪುರಭವನದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್ ಮತ್ತು ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಾಸಕರು ತಿಳಿಸಿದರು.

LEAVE A REPLY

Please enter your comment!
Please enter your name here