ಪುತ್ತೂರು: ನೆಲ್ಯಾಡಿ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟವು ಗಾಂಧಿ ಮೈದಾನದಲ್ಲಿ ಸಂಪನ್ನಗೊಂಡಿತು.
ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ನ ಚೇರ್ಮೇನ್ ಶಿವರಾಮ ಯೇನೆಕಲ್ಲು ಭಾಗವಹಿಸಿ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಂಡಗಳಿಂದ ಧ್ವಜವಂದನೆಯನ್ನು ಸ್ವೀಕರಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿ ವಿದ್ಯಾರ್ಥಿ ಜೀವನ ತುಂಬಾ ಮಹತ್ವದ್ದು. ನಿಮ್ಮನ್ನು ನೋಡಿ ನನಗೂ ಕಾಲೇಜಿನ ಕ್ರೀಡಾ ಜೀವನ ನೆನಪಾಗುತ್ತದೆ. ಇಂತಹ ಕ್ರೀಡಾಕೂಟಗಳಲ್ಲಿ ಭಾಗಿಯಾಗಿ ಕಬಡ್ಡಿ, ಖೋಖೋ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ಸಾಧನೆ ಮಾಡಿ ಈ ಹಂತಕ್ಕೆ ಬರಲು ಸಾಧ್ಯವಾಗಿದೆ. ಹಾಗಾಗಿ ಕಾಲೇಜಿನ ಮೂಲಕ ನಡೆಯುವ ಕ್ರೀಡಾಕೂಟಗಳು ವಿದ್ಯಾರ್ಥಿಯ ಜೀವನವನ್ನು, ಭವಿಷ್ಯವನ್ನು ಧನಾತ್ಮಕವಾಗಿ ಪರಿವರ್ತನೆಗೆ ತರಲು ತುಂಬಾ ಸಹಕಾರಿಯಾಗಿವೆ ಎಂದರು.
ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಸುರೇಶ್ ಮಾತನಾಡಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಸೋತಾಗ ಕುಗ್ಗದೇ ಗೆದ್ದಾಗ ಅಹಂನ್ನು ಬೆಳೆಸಿಕೊಳ್ಳದೇ ಸಮಾನವಾಗಿ ಕ್ರೀಡಾ ಸ್ಪೂರ್ತಿಯಿಂದ ಪಾಲ್ಗೊಳ್ಳಲು ಸಲಹೆ ನೀಡಿದರು.
ಮುಖ್ಯ ಅತಿಥಿ ಕಾಲೇಜಿನ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಉಷಾ ಅಂಚನ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಅತಿಥಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗಿಸ್, ಶಿಕ್ಷಕ-ರಕ್ಷಕ ಸಂಘದ ಕಾರ್ಯಾಧ್ಯಕ್ಷ ಅಬ್ದುಲ್ ಖಾದರ್, ಸಂತಜಾರ್ಜ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕ ಮಹಮ್ಮದ್ ಹ್ಯಾರಿಸ್. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಆನಂದ್ ಕೆ, ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ ಪ್ರಜಿತ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅರ್ಥಶಾಸ್ತ್ರ ಉಪನ್ಯಾಕಿ ಶ್ರುತಿ ಸ್ವಾಗತಿಸಿ, ಉದ್ಘಾಟಕರ ಪರಿಚಯವನ್ನು ಇಂಗ್ಲೀಷ್ ಉಪನ್ಯಾಸಕಿ ವನಿತಾ ಪಿ ಅವರು ನೆರವೇರಿಸಿ,ಉಪನ್ಯಾಸಕಿ ಡೀನಾ ಪಿ ಪಿ ನಿರೂಪಿಸಿ, ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿ ವೆರೋನಿಕಾ ಪ್ರಭಾ ವಿ ಪಿ ವಂದಿಸಿದರು.
ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ನಿರ್ದೇಶಕ ಆನಂದ್ ಕೆ ಮಾರ್ಗದರ್ಶನದಲ್ಲಿ ಕ್ರೀಡೆ ನೆರವೇರಿತು.