ಕಲಿತ ಶಾಲೆಯಲ್ಲೇ ಶಾಲಾ ಪ್ರಾರಂಭೋತ್ಸವ ಮಾಡಿದ ಶಾಸಕರು

0

ಸರಕಾರಿ ಶಾಲೆಯಲ್ಲಿ ಕಲಿತವರೇ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದಾರೆ

ಪುತ್ತೂರು; ಪುತ್ತೂರು ಶಾಸಕ ಅಶೋಕ್ ರೈ ಕೊಡಿಂಬಾಡಿ ತಾನು ಪ್ರಾಥಮಿಕ ಶಿಕ್ಷಣ ಪಡೆದ ಕೋಡಿಂಬಾಡಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡುವ ಮೂಲಕ ತಾನು ಕಲಿತ ಶಾಲೆಗೆ ಗೌರವ ಸಲ್ಲಿಸಿದ್ದಾರೆ.

ಶಾಸಕರನ್ನು ಶಿಕ್ಷಕರು, ಎಸ್‌ಡಿಎಂಸಿ ಸಮಿತಿಯವರು, ಕೋಡಿಂಬಾಡಿ ಗ್ರಾಪಂ ಆಡಳಿತ, ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರೀತಿಯಿಂದ ಬರಮಾಡಿಕೊಂಡರು. ಶಾಸಕರಿಗೆ ಶಾಲು ಹೊದಿಸಿ , ಹೂಮಾಲೆ ಹಾಕಿ ಸನ್ಮಾನಿಸಿದರು. ಶಾಸಕರು ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪುಟ್ಟ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರಿ ಶಾಲೆಯನ್ನು ಕೇವಲವಾಗಿ ಯಾರೂ ಕಾಣಬಾರದು, ಸರಕಾರಿ ಶಾಲೆಯಲ್ಲಿ ಓದಿದವರೇ ದೇಶದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದಾರೆ. ಪ್ರಧಾನಿಗಳಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಎಲ್ಲರೂ ಸರಕಾರಿ ಶಾಲೆಯಲ್ಲೇ ಕಲಿತವರು. ನಾನು ಕೂಡಾ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದೇನೆ ನಾನೀಗ ಪುತ್ತೂರು ಶಾಸಕನಾಗಿದ್ದೇನೆ ಎಂದು ಹೇಳಿದರು. ಸರಕಾರಿ ಶಾಲೆಯ ಬಗ್ಗೆ ಎಲ್ಲರಿಗೂ ಪ್ರೀತಿ ಇರಬೇಕು, ಶಾಲೆಯನ್ನು ಉಳಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ವಿನಂತಿಸಿದರು.


ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶೇಖರ ಜೇಡರಪಾಲು, ಪ್ರಭಾರ ಮುಖ್ಯ ಶಿಕ್ಷಕಿ ಪುಷ್ಪಾವತಿ ಕೆ , ಕೋಡಿಂಬಾಡಿ ಗ್ರಾಪಂ ಅಧ್ಯಕ್ಷರಾದ ರಾಮಚಂದ್ರ ಪೂಜಾರಿ, ಗ್ರಾಪಂ ಸದಸ್ಯರಾದ ಜಯಪ್ರಕಾಶ್ ಬದಿನಾರು, ಎಸ್‌ಡಿಎಂಸಿ ಉಪಾಧ್ಯಕ್ಷ ಸುರೇಶ , ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರುಗಳು, ಪೋಷಕರು ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here