ಬೆಂಗಳೂರು: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS IDಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ. ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS IDಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.