ಕೆಮ್ಮಾರ: ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಮೇ.31ರಂದು ನಡೆಯಿತು.ಹೊಸ ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಹಾಗೂ ರಕ್ಷಕ ವೃಂದ ಪುಷ್ಪಾರ್ಚನೆ ಮಾಡುವ ಮೂಲಕ ಬ್ಯಾಂಡ್ ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ. ವಹಿಸಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಜಯಶ್ರೀ.ಎಮ್ ಮಾತನಾಡಿ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಗುಣಮಟ್ಟದ ಶಿಕ್ಷಣದಲ್ಲಿ ಪೈಪೋಟಿ ನೀಡುತ್ತಿದೆ. ಇಂತಹ ಕಾರ್ಯಕ್ರಮಗಳು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಪೂರಕವಾಗಲಿದೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ಶೆಟ್ಟಿ ಬಡಿಲ ಮಾತನಾಡಿ ಸರಕಾರಿ ಶಾಲೆಯಲ್ಲಿ ಇಂತಹ ಶಿಕ್ಷಣಕ್ಕೆ ಪೂರಕವಾದ ಪ್ರೋತ್ಸಾಹಕರ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಲಿ ಎಂದು ಶುಭ ಹಾರೈಸಿದರು.
ಸಭೆಯಲ್ಲಿ ಹಿಂದಿನ ಶೈಕ್ಷಣಿಕ ವರ್ಷದ ಕಲಿಕಾ ವಿಭಾಗ ಮತ್ತು ಹಾಜರಾತಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.ಸಮವಸ್ತ್ರ ಹಾಗೂ ಶೈಕ್ಷಣಿಕ ವರ್ಷದ ಪಠ್ಯಪುಸ್ತಕ ವಿತರಣೆ ಮಾಡಲಾಯಿತು.
ಕಾರ್ಯಕ್ರಮಕ್ಕೆ ಬೇಕಾದ ತಯಾರಿಗಳನ್ನು ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ತೇಜಾ, ಗ್ರಾಮ ಪಂಚಾಯತ್ ಸದಸ್ಯರಾದ ಹೇಮಂತ್ ಮೈತ್ತಲಿಕೆ, ವಾರಿಜಾಕ್ಷಿ ಬಡ್ಡಮೆ, ಉಷಾ ಮಹೇಶ ಕೇದಗೆದಡಿ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಹಿರೆಬಂಡಾಡಿ ಗ್ರಾಮ ಪಂಚಾಯತ್ ಸದಸ್ಯೆ ವಾರಿಜಾಕ್ಷಿ, ಹೇಮಂತ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮೆಹನಾಝ್ ಸ್ವಾಗತಿಸಿ, ಶಿಕ್ಷಕಿ ಸುಮನ ಕಾರ್ಯಕ್ರಮ ನಿರೂಪಿಸಿ, ಮೋಹನಾಂಗಿ ವಂದಿಸಿದರು.