ಪುತ್ತೂರ:ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರ್ವರನ್ನು ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಲಾಗಿದೆ.
ಕಳೆದ ಹಲವು ವರ್ಷಗಳಿಂದ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎ.ಕುಮಾರ್ ಮತ್ತು ಟೈಪಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುಭಾಷಿಣಿ ಅವರನ್ನು ಮಂಗಳೂರುಗೆ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಲಾಗಿದೆ. ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇವರಿಗೆ ಮೇ 31ರಂದು ಬೀಳ್ಕೊಡುಗೆ ನಡೆಯಿತು.