ಹಂಟ್ಯಾರು ಹಿ.ಪ್ರಾ ಶಾಲೆಯಲ್ಲಿ ಪ್ರಾರಂಭೋತ್ಸವ

0

ಪುತ್ತೂರು: ಆರ್ಯಾಪು ಗ್ರಾಮದ ಹಂಟ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ.31ರಂದು ನಡೆಯಿತು.
ಮಕ್ಕಳಿಗೆ ಪುಸ್ತಕ, ಪೆನ್ಸಿಲ್, ಬಲೂನ್, ಸಿಹಿತಿಂಡಿ ನೀಡಿ, ಬ್ಯಾಂಡ್ ವಾದ್ಯದೊಂದಿಗೆ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಶಾಲಾ ಸಮವಸ್ತ್ರ ವಿತರಿಸಲಾಯಿತು. ಆರ್ಯಾಪು ಗ್ರಾ.ಪಂ ಸದಸ್ಯ ಹರೀಶ್ ನಾಯಕ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಾಬು ಮರಿಕೆ ಮತ್ತು ಸದಸ್ಯರು, ಪೋಷಕರು, ಅಂಗನವಾಡಿ ಕಾರ್ಯಕರ್ತೆ, ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here