ಕೌಕ್ರಾಡಿ: ಶಾಲಾ ಪ್ರಾರಂಭೋತ್ಸವ

0

ಕೊಕ್ಕಡ: ಸಂತ ಜಾನರ ಹಿ.ಪ್ರಾ. ಶಾಲೆ ಕೌಕ್ರಾಡಿಯಲ್ಲಿ ಮೇ. 31 ರಂದು ಶಾಲಾ ಪ್ರಾರಂಭೋತ್ಸವ ಜರುಗಿತು. ಧರ್ಮಗುರುಗಳಾದ ವಂ. ಫಾ. ಅಶೋಕ್ ಡಿ ಸೋಜ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೊಕ್ಕಡ ಚರ್ಚಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ನೋಯಲ್ ಮೊಂತೆರೊ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.ಹೊಸದಾಗಿ ಶಾಲೆಗೆ ಸೇರಿದ ವಿದ್ಯಾರ್ಥಗಳಿಗೆ ಮಕ್ಕಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿ,ಸಿಹಿ, ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿ ಕು. ದೀಪ್ತಿ ಸ್ವಚ್ಛತೆ , ನೈರ್ಮಲ್ಯ ಕುರಿತು ಮಾಹಿತಿ ನೀಡಿದರು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಿಳಿಸಿದರು.

ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸ್ವಾಗತಿಸಿ, ಸಹ ಶಿಕ್ಷಕಿ ಜೆನೆವಿವ್. ಫೆರ್ನಾಂಡಿಸ್ ವಂದಿಸಿ,ಗೌರವ ಶಿಕ್ಷಕಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here