ಕಡಬ: ಕಂಬದಲ್ಲಿ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಪವರ್‌ಮ್ಯಾನ್‌ ಗಂಭೀರ

0

ಕಡಬ:ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ.

ಗಾಯಗೊಂಡ ಪವರ್ ಮ್ಯಾನ್ ನ ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ.

ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ . ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು ಬಳಿಕ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here