ಜೂ.3: ಆಲಂಕಾರಿನಲ್ಲಿ ಕೆ.ಚಂದ್ರಶೇಖರ ಪೂಜಾರಿಯವರಿಗೆ ಶ್ರದ್ಧಾಂಜಲಿ

0

ಆಲಂಕಾರು: ಮೇ 26ರಂದು ನಿಧನರಾದ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕರೂ ಆಗಿದ್ದ ಕೆ.ಚಂದ್ರಶೇಖರ ಪೂಜಾರಿ ಆಲಂಕಾರು ಅವರಿಗೆ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ಜೂ.3ರಂದು ಅಪರಾಹ್ನ 2 ಗಂಟೆಗೆ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದೀನದಯಾಳು ಸಭಾಭವನದಲ್ಲಿ ನಡೆಯಲಿದೆ.


ಕೆ.ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಬಿಲ್ಲವ ಸಂಘದ ಸಂಚಾಲಕರಾಗಿ, ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ, ಆಲಂಕಾರು ಸರಕಾರಿ ಹಿ.ಪ್ರಾ.ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಂಘಟನಾ ಚತುರರಾಗಿ ಗುರುತಿಸಿಕೊಂಡಿದ್ದರು. ಇವರ ಶ್ರದ್ದಾಂಜಲಿ ಸಭೆಯಲ್ಲಿ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಯನ್.ಮುತ್ತಪ್ಪ ಪೂಜಾರಿ ನೈಯ್ಯಲ್ಗ ಪ್ರಸ್ತಾವನೆ ಮಾಡಲಿದ್ದಾರೆ. ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ ನುಡಿನಮನ ಸಲ್ಲಿಸಲಿದ್ದಾರೆ.

ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್‌ಕುಮಾರ್ ಕೆಡೆಂಜಿ, ಆಲಂಕಾರು ಗ್ರಾ.ಪಂ.ಅಧ್ಯಕ್ಷ ಸದಾನಂದ ಆಚಾರ್ಯ, ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಮೋದರ ಗೌಡ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಧರ್ಮಪಾಲ ರಾವ್, ಆಲಂಕಾರು ಶ್ರೀ ದುರ್ಗಾಂಬಾ ಕಲಾ ಸಂಗಮದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ನೈಮಿಷ, ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು, ಗಣರಾಜ ಆಲಂಕಾರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here