ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ-ಅಪಾಯದಿಂದ ಪಾರು

0

ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

ಕೇರಳದ ಉಪ್ಪಳ ನಿವಾಸಿಗಳು ಹೊಚ್ಚ ಹೊಸ ಕಾರಿನಲ್ಲಿ ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಕಾರಿನ ಎರಡು ಏರ್ ಬ್ಯಾಗ್ ತೆರೆದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು,
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಕಾರು ಸಂಪೂರ್ಣವಾಗಿ ಹಾನಿಗೊಂಡಿದೆ.

LEAVE A REPLY

Please enter your comment!
Please enter your name here