ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು: ಪ್ರಥಮ ಪಿಯುಸಿ ಪೋಷಕರ ಸಭೆ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ತರಗತಿಗಳು, ವಿದ್ಯಾರ್ಥಿ-ಪೋಷಕರ ಸಭೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕ ಯುಜಿ ರಾಧ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಪ್ರಾಂಶುಪಾಲರಾದ ಎಚ್ ಕೆ ಪ್ರಕಾಶ್ ವಿದ್ಯಾರ್ಥಿಗಳಿಗೆ ಕಾಲೇಜು ಪರಿಚಯಿಸಿ, ಶಿಸ್ತು, ಸಮಯಪಾಲನೆ, ಶೈಕ್ಷಣಿಕ ಚಟುವಟಿಕೆಗಳು ಇತ್ಯಾದಿಗಳ ಕುರಿತು ಸ್ಥೂಲ ಮಾಹಿತಿ ನೀಡಿದರು. ಸಂಚಾಲಕರು ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಗೆ ಸ್ವಾಗತಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದವಿಪೂರ್ವ ವಿಭಾಗದ ಶೈಕ್ಷಣಿಕ ಸಲಹೆಗಾರ ರಾಜೇಶ್ ಪೈಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಸ್ವಾತಿ ಬಿಎಸ್ ನಿರೂಪಿಸಿದರು. ಸುಂದರಿ ವಂದಿಸಿದರು.

LEAVE A REPLY

Please enter your comment!
Please enter your name here