ನಿಡ್ಪಳ್ಳಿ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ದೆ ಉಪ್ಪಳಿಗೆ ಇದರ 2023-24 ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೆ.31 ರಂದು ನಡೆಯಿತು.
ಆರಂಭದಲ್ಲಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಜಾಥಾ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮವನ್ನು ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಉಮಾವತಿ ಹಾಗೂ ವಿದ್ಯಾ ಸರೋಲಿಕಾನ ಶುಭಹಾರೈಸಿದರು.
ಒಂದನೇ ತರಗತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪುಸ್ತಕ ಪೆನ್ಸಿಲ್ ನೀಡುವ ಮೂಲಕ ಸ್ವಾಗತಿಸಲಾಯಿತು. ಎಲ್ಲ ವಿದ್ಯಾರ್ಥಿಗಳಿಗೂ ಸರಕಾರದಿಂದ ಸಿಗುವ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು.
ಶಾಲಾ ಎಸ್.ಡಿ ಎಂ.ಸಿ ಅಧ್ಯಕ್ಷರಾದ ಲೋಕನಾಥ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಗುರುಗಳಾದ ಲಿಂಗಮ್ಮ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.
ಸಹಶಿಕ್ಷಕಿ ಪಾರ್ವತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸಹಶಿಕ್ಷಕಿಯರಾದ ಪುಷ್ಪಾವತಿ, ನಾಗರತ್ನ, ಗೀತಾ ಹಾಗೂ ಗೌರವ ಶಿಕ್ಷಕಿಯರು ಸಹಕರಿಸಿದರು. ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಕೃಷ್ಣಪ್ರಸಾದ್ ಆಳ್ವ ಹಾಗೂ ರಿಕ್ಷಾ ಚಾಲಕರು ಉಪ್ಪಳಿಗೆ ಸಿಹಿತಿಂಡಿ ಒದಗಿಸಿದರು.