ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿರ್ವಾಹಕನಿಗೆ ಹಲ್ಲೆ

0

ಪುತ್ತೂರು: ಬಸ್‌ನ ಒಳಗಿದ್ದ ಪ್ರಯಾಣಿಕರು ಇಳಿದ ಬಳಿಕ ಬಸ್ ಏರುವಂತೆ ಪ್ರಯಾಣಿಕರೊಬ್ಬರಿಗೆ ಹೇಳಿರುವ ವಿಚಾರಕ್ಕೆ ಸಂಬಂಧಿಸಿ ನಿರ್ವಾಹಕನಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲ ಜೂ.1ರಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಗಾಳಿಮುಖದಿಂದ ಪುತ್ತೂರು ಬಸ್ ನಿಲ್ದಾಣಕ್ಕೆ ಬಂದ ಧರ್ಮಸ್ಥಳ ಕೆಎಸ್‌ಅರ್‌ಟಿಸಿ ಬಸ್‌ನ ನಿರ್ವಾಹಕ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ತುಳಸಿಗೇರಿ ಮನದಾಗಿ(39ವ)ರವರು ಹಲ್ಲೆಗೊಳಗಾದವರು.

ಅವರು ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದಾಗ ಪ್ರಯಾಣಿಕರೊಬ್ಬರು ಏಕಾಏಕಿ ಬಸ್ಸನ್ನು ಹತ್ತಲು ಪ್ರಯತ್ನಿಸಿದ್ದರು. ಈ ಕುರಿತು ನಿರ್ವಾಹಕ ತುಳಸಿಗೇರಿ ಮನದಾಗಿ ಅವರು ಜನರು ಇಳಿದ ನಂತರ ಬಸ್ ಹತ್ತುವಂತೆ ತಿಳಿಸಿದ್ದರು. ಇದರಿಂದ ಕೋಪಗೊಂಡ ವ್ಯಕ್ತಿ ನಿರ್ವಾಹಕನಿಗೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ನಿರ್ವಾಹಕನನ್ನು ಅದೇ ಬಸ್‌ನ ಚಾಲಕ ಗೌಸ್ ಎಂಬವರು ಆಟೋ ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿರ್ವಾಹಕನಿಗೆ ಹಲ್ಲೆ ನಡೆಸಿದ ವ್ಯಕ್ತಿಯ ಹೆಸರು ಮಹಮ್ಮದ್ ಸಲಾಂ ಎಂದು ತಿಳಿದು ಬಂದಿರುವುದಾಗಿ ಪೊಲೀಸ್ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here