ಜೂ.15ರವರೆಗೆ ಬಸ್‌ಪಾಸ್ ಮಾನ್ಯತೆ; ಶಾಲಾ/ಕಾಲೇಜು ದಾಖಲಾತಿ ಶುಲ್ಕ ಪಾವತಿ ರಶೀದಿ, ಕಳೆದ ಸಾಲಿನ ಬಸ್‌ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ

0

ಪುತ್ತೂರು: ರಾಜ್ಯದಲ್ಲಿ ಮೇ31ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನರಾರಂಭಗೊಂಡಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಳೆಯ ಬಸ್ಸನ್ನು ಮಾನ್ಯ ಮಾಡಿದ್ದು ಪಾಸ್ ಅವಧಿಯನ್ನು ಜೂ.15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಬೇಕಿರುತ್ತದೆ. ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕಾಗಿರುತ್ತದೆ. ಆದುದರಿಂದ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಶಾಲಾ/ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಶುಲ್ಕ ಪಾವತಿ ರಶೀದಿ ಅಥವಾ 2022-23ನೇ ಸಾಲಿನ ವಿದ್ಯಾರ್ಥಿ ಬಸ್‌ಪಾಸ್‌ನ್ನು ನಿಗಮದ ಬಸ್ಸುಗಳಲ್ಲಿ ತೋರಿಸಿ ನಗರ, ಹೊರಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಕರಾರಸಾ ನಿಗಮದ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here