ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕೌಶಲ್ಯಾಧಾರಿತ ಉದ್ಯಮ ಕುರಿತು ಕಾರ್ಯಾಗಾರ

0

ಪುತ್ತೂರು: ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ ಆಂಡ್ ಎಂಜಿನಿಯರಿಂಗ್ ನ ಸಹಾಯಕ ಪ್ರಾಧ್ಯಾಪಕರಾದ ವರುಣ್ ಕೆ. ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯಾವುದೇ ಉದ್ಯೋಗ ಪಡೆಯಲು ಬೇಕಾದ ಮೂಲಭೂತ ಆರ್ಹತೆಗಳು, ಕೌಶಲ್ಯಗಳು ಹಾಗೂ ಸಂದರ್ಶನವನ್ನು ಎದುರುಸಲು ವಿದ್ಯಾರ್ಥಿಗಳಿಗೆ ಬೇಕಾಗುವ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯಗಳ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡುತ್ತಾ ವಿದ್ಯಾರ್ಥಿಗಳೊಂದಿಗೆ ಪ್ರಾಯೋಗಿಕ ನಿದರ್ಶನಗಳ ಮೂಲಕ ಸಂವಾದ ನಡೆಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಸಹ ಸಂಯೋಜಕರಾದ ಡಾ. ಸೀತಾರಾಮ ಪಿ., ಪ್ರಸ್ತುತ ಜಾಗತೀಕರಣದ ಪರಿಣಾಮದಿಂದ ಖಾಸಗೀಕರಣದ ಪಾಲುದಾರಿಕೆಯಿಂದ ಔದ್ಯೋಗಿಕ ಕ್ಷೇತ್ರವು ಅನಿರಿಕ್ಷೀತ ಬದಲಾವಣೆಗಳನ್ನು ಕಂಡಿದೆ. ಒಬ್ಬ ಸಾಮಾನ್ಯ ವ್ಯಕ್ತಿಯು ಕೂಡ ಅಲ್ಪ ಬಂಡವಾಳದೊಂದಿಗೆ ಕೌಶಲ್ಯ ಮತ್ತು ದೂರದೃಷ್ಟಿಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪೂರಕವಾದ ವಾತಾವರಣವು ಈ ಸಂದರ್ಭದಲ್ಲಿ ಕಾಣುತ್ತಿದ್ದೇವೆ. ಹಾಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರದ ಬಗ್ಗೆ ಜ್ಞಾನ ಪಡೆದುಕೊಳ್ಳುವುದು ಮಹತ್ವದ್ದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಾಣಿಜ್ಯ ಸಂಘದ ಸಂಚಾಲಕರಾದ ಶ್ರೀಮತಿ ದಿವ್ಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವರನ್ನೂ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೆರೋನಿಕಾ ಪ್ರಭಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ದಿವ್ಯ ಶ್ರೀ ಜಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here