ವಿಟ್ಲ: ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮೀಣ ಮಟ್ಟದ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮುಂಗಾರು ಮಳೆ ಮತ್ತು ಪ್ರಾಕೃತಿಕ ವಿಕೋಪದ ಬಗ್ಗೆ ಚರ್ಚಿಸುವ ಉದ್ದೇಶದಿಂದ ಜರುಗಿದ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡೆಂಗ್ಯೂ, ಮಲೇರಿಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ಇವುಗಳ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿ ನೀಡುವ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ವೈದ್ಯಾಧಿಕಾರಿ ಡಾ. ಶಶಿಕಲಾ, ಪಶುವೈದ್ಯಾಧಿಕಾರಿ ಡಾ. ಕಿಶೋರ್, ಗ್ರಾಮ ಅಧಿಕಾರಿ ಸುವಾಸಿನಿ, ಕೃಷಿ ಅಧಿಕಾರಿ ಎಸ್.ಕೆ.ಸರೀಕರ್, ರಾಷ್ಟ್ರೀಯ ಹೆದ್ದಾರಿಯ ವೀರೇಶ್, ಸರ್ಕಾರಿ ಶಾಲೆಯ ನಾಗೇಶ್, ಅಂಗನವಾಡಿ ಮತ್ತು ಆಶಾe ಕಾರ್ಯಕರ್ತೆಯರು ಮೊದಲಾದವರು ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.