ಬಡಗನ್ನೂರು-ಪಟ್ಟೆ ವಿದ್ಯಾಸಂಸ್ಥೆಯ ಶಾಲಾ ಪ್ರಾರಂಭೋತ್ಸವ

0

ಬಡಗನ್ನೂರು: ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ.31 ರಂದು ಜರಗಿತು. ಶಾಲಾ ಸಂಚಾಲಕ  ನಾರಾಯಣ ಭಟ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಟ್ಟೆ ವಿದ್ಯಾ ಸಂಸ್ಥೆಯ ಅಧ್ಯಕ್ಷ  ವೇಣುಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಹೊಸದಾಗಿ ಸೇರಿದ ಮಕ್ಕಳಿಗೆ ಶುಭ ಹಾರೈಸಿದ್ದರು.

ಶಾಲೆಯನ್ನು ಬಲೂನ್ ಮತ್ತು ಹಸಿರು ತೋರಣಗಳಿಂದ ಅಲಂಕರಿಸಕಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರತಿಭಾ ಪ್ರೌಢಶಾಲೆ ಎಸ್ ಡಿಎಂಸಿ ಅಧ್ಯಕ್ಷ ಬೆಳ್ಳಿಯಪ್ಪ ಗೌಡ, ಪ್ರಾರ್ಥಮಿಕ ಶಾಲೆ ಎಸ್ ಡಿಎಂಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಪ್ರಾರ್ಥಮಿಕ ಶಾಲಾಮುಖ್ಯ ಶಿಕ್ಷಕ ರಾಜಗೋಪಾಲ ವಂದನಾರ್ಪಣೆಗೈದರು. ಪ್ರೌಢಶಾಲಾ ಶಿಕ್ಷಕ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಸರಕಾರದಿಂದ ನೀಡಲಾದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು.

LEAVE A REPLY

Please enter your comment!
Please enter your name here