ಬಡಗನ್ನೂರು: ಬಾಲಸುಬ್ರಹ್ಮಣ್ಯ ಹಿ.ಪ್ರಾ ಶಾಲಾ  ಪ್ರಾರಂಭೋತ್ಸವ

0

ಬಡಗನ್ನೂರು: ಸುಳ್ಯಪದವು ಬಾಲಸುಬ್ರಹ್ಮಣ್ಯ ಹಿ.ಪ್ರಾ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ.31ರಂದು ನಡೆಯಿತು. ಶಾಲಾ ಸಂಚಾಲಕ  ಮಹಾದೇವ ಭಟ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವರಾಮ ವಹಿಸಿ, ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದ ಆರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಆರತಿ ಬೆಳಗಿ ಪುಷ್ಪಾರ್ಚಣೆ ಮಾಡುವ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ವಿದ್ಯಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಸಂಸ್ಥಾಪಕರ ಭಾವ ಚಿತ್ರಕ್ಕೆ ಪುಷ್ಪಾರ್ಚಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ನಿರ್ದೇಶಕ  ವೀರೇಂದ್ರ, ಬಡಗನ್ನೂರು ಗ್ರಾ.ಪಂ ಸದಸ್ಯ ಪದ್ಮನಾಭ, ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರ ರಾವ್  ಹಾಗೂ ಸತ್ಯ ಶಂಕರ್ ಭಟ್ ಉಪಸ್ಥಿತರಿದ್ದರು. ಪ್ರೌಢಶಾಲೆ ವಿಭಾಗದ ಶಿಕ್ಷಕಿ ಪ್ರಶಾಂತಿ ಸ್ವಾಗತಿಸಿದರು. ಶಿಕ್ಷಕ ಸುಹಾಸ್ ವಂದಿಸಿ, ಸುಖೇಶ್ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here