ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ2023-24ರ ಗುಣಾತ್ಮಾಕ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು.
ಅಮೆರಿಕಾದಲ್ಲಿ ಉದ್ಯೋಗಿಯಾಗಿರುವ ಜಾನ್ಸನ್ ಮ್ಯಾಥ್ಯೂರವರು ಉದ್ಘಾಟಿಸಿ, ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಡನೆ ಹಂಚಿಕೊಂಡರು. ಅತಿಥಿಯಾಗಿದ್ದ ತುಳು ಚಲನಚಿತ್ರ ಕಲಾವಿದ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ರವಿ ರಾಮಕುಂಜ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ದುಡಿಮೆಯ ಉಳಿತಾಯದಿಂದ ವಿದ್ಯಾರ್ಥಿ ವೇತನ ನೀಡಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಕದ್ರ ಅವರು ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾದ ಪಠ್ಯ ಪುಸ್ತಕಗಳನ್ನು ವಿತರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸದಸ್ಯ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್ ಪ್ರಾಸ್ತವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕ ವೆಂಕಟೇಶ್ ದಾಮ್ಲೆ ಸ್ವಾಗತಿಸಿದರು. ಶಿಕ್ಷಕ ಪ್ರವೀಣ್ ಕುಮಾರ್ ನಿರೂಪಿಸಿದರು. ಶಿಕ್ಷಕಿ ನಿಶ್ಚಿತ ಎಸ್.ಜಿ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿಸದ್ದರು.