ಭಾರತ್ ಕಟ್ಟಡ ಕಾರ್ಮಿಕ ಸಂಘದ ಮಾಸಿಕ ಸಭೆ – ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ

0

ಪುತ್ತೂರು: ಭಾರತ್ ಕಟ್ಟಡ ಕಾರ್ಮಿಕ ಸಂಘದ ಮಾಸಿಕ ಸಭೆಯು ಗೌರವಾಧ್ಯಕ್ಷ ಲೋಕೇಶ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಸಂಘದ ಮಾಜಿ ಉಪಾಧ್ಯಕ್ಷ ಅಣ್ಣಿ ಪೂಜಾರಿ ಮತ್ತು ಸದಸ್ಯ ಯೂಸುಫ್ ರವರಿಗೆ ಒಂದು ನಿಮಿಷ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಂಘದ ಕಾರ್ಯಾಧ್ಯಕ್ಷ ಪೌಲ್ ಡಿ ಸೋಜಾ ಹಾಗೂ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಶ್ರಫ್ ಮತ್ತು ಯು ಲೋಕೇಶ ಹೆಗ್ಡೆಯವರು ನುಡಿನಮನ ಸಲ್ಲಿಸಿದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷ ರುಕ್ಮಯ ಗೌಡ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಶ್ರಫ್, ಕಾರ್ಯಾಧ್ಯಕ್ಷ ಪೌಲ್ ಡಿ ಸೋಜಾ ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here