ಸವಣೂರು :ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಎಂ. ಎಸ್. ಡಬ್ಲೂ ವಿಭಾಗ (ಸ್ನಾತಕೋತ್ತರ ಸಮಾಜಕಾರ್ಯ ), ಸವಣೂರು ಗ್ರಾಮ ಪಂಚಾಯತ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸವಣೂರು ವಲಯ ಇದರ ವತಿಯಿಂದ ಮಂಗಳೂರು ಎ. ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಇದರ ಸಹಯೋಗದೊಂದಿಗೆ ಜೂ.4 ರಂದು ಸವಣೂರು ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಅರೋಗ್ಯ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ನಡೆಯಿತು .
ಕಾರ್ಯಕ್ರಮ ಉದ್ಘಾಟಿಸಿದ ಸಂತ ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲ ಪ್ರೋ| ಗಣೇಶ್ ಭಟ್ ಮಾತನಾಡಿ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ಈ ಊರಿನ ಜನರು ಪಡೆದಾಗ ಈ ಕಾರ್ಯಕ್ರಮದ ಆಯೋಜನೆಯು ಯಶಸ್ವಿಯಾಗುತ್ತದೆ ಎಂದರು.
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ “ಜನಪರ ಕಾಳಜಿ ಇರುವ ಇಂತಹ ಕಾರ್ಯಕ್ರಮಗಳು ಗ್ರಾಮೀಣ ಮಟ್ಟದಲ್ಲಿ ಹೆಚ್ಚು ಹೆಚ್ಚಾಗಿ ಆಯೋಜಿಸಲ್ಪಟ್ಟು ಜನರಲ್ಲಿ ಅರಿವನ್ನು ಹೆಚ್ಚಿಸಬೇಕು.ಈ ರೀತಿಯ ಕಾರ್ಯಕ್ರಮವನ್ನು ಆಯೋಜಿಸಿರುವ ಸಂತ ಫಿಲೋಮೀನಾ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ. ಇಂತಹ ಆರೋಗ್ಯದ ಅರಿವನ್ನು ಮೂಡಿಸುವ ಕಾರ್ಯಕ್ರಮಗಳು ಉಚಿತವಾಗಿ ನಡೆದಾಗ ಜನರು ಅದರ ಪ್ರಯೋಜನವನ್ನು ಪಡೆಯಬೇಕು ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು ” ಎಂದರು.
ಅಧ್ಯಕ್ಷತೆ ವಹಿಸಿದ್ದ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ. ವಿ. ಶೆಟ್ಟಿ ಮಾತನಾಡಿ “ಇಂತಹ ಕಾರ್ಯಕ್ರಮಗಳ ಆಯೋಜನೆಗೆ ನಮ್ಮ ಸಹಕಾರ ಸದಾ ಇರುತ್ತದೆ ಮತ್ತು ಈ ಕಾರ್ಯಕ್ರಮದ ಪ್ರಯೋಜನವನ್ನು ಜನರು ಸದುಪಯೋಗಪಡಿಸಿಕೊಳ್ಳಲಿ, ಜೊತೆಗೆ ಕಾರ್ಯಕ್ರಮ ಯಶಸ್ವಿಯಾಗಲಿ “ಎಂದರು.
ಎ. ಜೆ. ವೈದ್ಯಕೀಯ ತಂಡದ ಪ್ರತಿನಿಧಿ ಮೆಡಿಕಲ್ ಸೋಶಿಯಲ್ ವರ್ಕರ್ ರಾಜೇಶ್. ಕೆ. ವಿ ಶಿಬಿರದಲ್ಲಿ ಲಭ್ಯವಿರುವ ಆರೋಗ್ಯ ಸೇವೆಯ ವಿವರ ನೀಡಿದರು.
ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ. ಎ., ಸವಣೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ. ಕೆ, ಉಪಸ್ಥಿತರಿದ್ದರು.
ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರತಿಭಾ. ಕೆ. ಪ್ರಸ್ತಾವನೆಗೈದರು.
ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಶ್ರೀಮಣಿ ಸ್ವಾಗತಿಸಿ,ವಿದ್ಯಾರ್ಥಿನಿ ವೈಷ್ಣವಿ. ಯಂ. ಆರ್.ವಂದಿಸಿ, ವಿದ್ಯಾರ್ಥಿನಿ ಲತಾಮಣಿ.ಯಂ. ನಿರೂಪಿಸಿದರು.