ಕಾಣಿಯೂರು ಗ್ರಾ.ಪಂ. ವತಿಯಿಂದ ವಿಶ್ವಪರಿಸರ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಲಲಿತಾ ದರ್ಖಾಸ್ ಅವರು ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಸದಸ್ಯ ತಾರಾನಾಥ ಇಡ್ಯಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಎಂ. ದೇವರಾಜ್ ,ಜಲಜೀವನ್ ಮಿಷನ್ ಯೋಜನೆಯ ಸಂಯೋಜಕರಾದ ಸ್ಮಿತಾ ಹಾಗೂ ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here