ಪರ್ಪುಂಜ: ವಿಶ್ವ ತಂಬಾಕು ವಿರೋಧಿ ದಿನಾಚರಣೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಸಮೃದ್ಧಿ ಜ್ಞಾನ ವಿಕಾಸ ಕೇಂದ್ರ ಪರ್ಪುಂಜ ಇದರ ಜಂಟಿ ಆಶ್ರಯದಲ್ಲಿ ಕುಂಬ್ರ ವಲಯದ ಕುಂಬ್ರ ಕಾರ್ಯಕ್ಷೇತ್ರದ ಪರ್ಪುಂಜ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕುಂಬ್ರ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ದಿವಾಕರ ಪೂಜಾರಿರವರು, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು,ತಾಯಂದಿರು ಮಕ್ಕಳ ಬಗ್ಗೆ ನಿಗಾ ವಹಿಸುವ ಕುರಿತು, ತಂಬಾಕು ಸೇವನೆಯಿಂದ ಬರುವ ಖಾಯಿಲೆಗಳ ಬಗ್ಗೆ ಮಾಹಿತಿಯನ್ನು ನೀಡಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಮುಂದಾಗಬೇಕು ಎಂದರು. ವಲಯ ಒಕ್ಕೂಟದ ಅಧ್ಯಕ್ಷ ಕುಂಬ್ರ ಎಸ್ ಮಾಧವ ರೈ ರವರು ದುಶ್ಚಟದಿಂದ ಸಮಾಜದಲ್ಲಾಗುವ ಅನಾಹುತಗಳ ಬಗ್ಗೆ ಮಾತನಾಡಿದರು.


ವೇದಿಕೆಯಲ್ಲಿ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಬದ್ರುನ್ನಿಸ ಪರ್ಪುಂಜ, ಒಳಮೊಗ್ರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸವಿತಾ ಎಸ್ ಶೇಕಮಲೆ, ಬೆಳಕು ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ರಾಜೀವಿ ಕುಂಬ್ರ ಹಾಗೂ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಶಶಿಕಲಾ ರೈ ಸ್ವಾಗತಿಸಿ, ಜ್ನಾನವಿಕಾಸ ಸಂಯೋಜಕಿ ತುಳಸಿ ವಂದಿಸಿದರು. ವಲಯ ಮೇಲ್ವಿಚಾರಕಿ ಮೋಹಿನಿ ಎಸ್ ಗೌಡ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here