ಪುತ್ತೂರು: ಪ್ರತಿ ತಿಂಗಳು ವಿಶೇಷ ಚಿಕಿತ್ಸೆಗಳನ್ನು ಅಳವಡಿಸಿಕೊಂಡು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಉಚಿತ ವೈದ್ಯಕೀಯ ಶಿಬಿರದ 15 ನೇ ತಿಂಗಳ ವೈದ್ಯಕೀಯ ಶಿಬಿರವು ಜೂ.4ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.
ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಅರಣ್ಯ ಇಲಾಖೆಯ ನಿವೃತ್ತ ಉಪವಲಯಾರಣ್ಯಾಧಿಕಾರಿ ಕೃಷ್ಣಪ್ಪ ಕೆ. ಮಾತನಾಡಿ, ಕಳೆದ 14 ತಿಂಗಳುಗಳಿಂದ ಶಿಬಿರವು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದು ಮಾದರಿ ಸೇವೆಯಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲಾಗುತ್ತಿದೆ ಎಂದರು.
ಆರೋಗ್ಯ ರಕ್ಷಾ ಸಮಿತಿಯ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಶುಭ ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು.
ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ಇಳಂತಾಜೆ ಸ್ವಾಗತಿಸಿದರು. ಹರಿಣಿ ಪುತ್ತೂರಾಯ ವಂದಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯೆ ಶಶಿಕಲಾ ಪ್ರಾರ್ಥಿಸಿದರು.
ಸುಮಾರು 190 ಮಂದಿ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ತಜ್ಞ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ, ಕೀಲು ಮತ್ತು ಎಲುಬು ತಜ್ಞ ಡಾ. ಸಚಿನ್ ಶಂಕರ್ ಹಾರಕೆರೆ, ಇ.ಎನ್.ಟಿ ತಜ್ಞೆ ಡಾ. ಅರ್ಚನಾ, ಆಯುರ್ವೇದ ತಜ್ಞರಾದ ರ್ಡಾ. ವೇಣು ಗೋಪಾಲ್, ಡಾ. ಸಾಯಿ ಪ್ರಕಾಶ್, ಡಾ. ದೀಕ್ಷಾ ಶಿಬಿರದಲ್ಲಿ ಚಿಕಿತ್ಸೆ ಹಾಗೂ ತಪಾಸಣೆಗಳನ್ನು ನಡೆಸಿಕೊಟ್ಟರು.
ಉಚಿತ ಚಿಕಿತ್ಸೆಯ ಜೊತೆಗೆ ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.
ನವಚೇತನ ಯುವಕ ಮಂಡಲ ಸಂಪ್ಯ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ, ಹಲವು ಔಷಧಿ ಕಂಪೆನಿಗಳು, ಸೆವನ್ ಸ್ಟಾರ್ ಗೈ ಮೊಟ್ಟೆ ತ್ತಡ್ಕ ಹಾಗೂ ಭಕ್ತಾದಿಗಳು ಶಿಬಿರದಲ್ಲಿ ಸಹಕರಿಸಿದರು.