ಬೆಳಂದೂರು ಗ್ರಾ.ಪಂ. ವತಿಯಿಂದ ವಿಶ್ವಪರಿಸರ ದಿನಾಚರಣೆ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಲೋಹಿತಾಕ್ಷ ಕೆಡೆಂಜಿಕಟ್ಟ ಅವರು ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷರಾದ ತೇಜಾಕ್ಷಿ ಕೊಡಂಗೆ, ಸದಸ್ಯರಾದ ಪ್ರವೀಣ್ ಕೆರೆನಾರ್, ಪಾರ್ವತಿ ಮರಕ್ಕಡ, ಕುಸುಮ ಅಂಕಜಾಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ನಾರಾಯಣ್, ಹಾಗೂ ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here