ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ರಂಝಿ ಮಹಮ್ಮದ್ ಕೆ.ಪಿ ಗಿಡ ನೆಡುವ ಮೂಲಕ ಉದ್ಘಾಟಿಸಿ ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳು ತಂದಿದ್ದ ವಿವಿಧ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು. ವಿಶ್ವ ಪರಿಸರ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಯೋಜನೆಯನ್ನು ಪರಿಸರ ಸಂಘದ ಸಂಯೋಜಕಿ ಸೋಫಿಯಾ ರೋಚೆ ನೆರವೇರಿಸಿದರು.

LEAVE A REPLY

Please enter your comment!
Please enter your name here