ಮನೆಯಲ್ಲಿಯೇ ಗಿಡ ನೆಟ್ಟು ಪರಿಸರ ದಿನ ಆಚರಿಸಿ : ತಾರಸಿ ಕೃಷಿಕ ಪಡ್ಡoಬೈಲ್ ಕೃಷ್ಣಪ್ಪ ಗೌಡ ಕರೆ
ವಿಶ್ವ ಪರಿಸರ ದಿನದ ಅಂಗವಾಗಿ ಪುತ್ತೂರು ತಾಲೂಕಿನ ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನವನ್ನು ಜೂ. 5 ರಂದು ಸಂಭ್ರಮದಿಂದ ಆಚರಿಸಲಾಯಿತು.
ಮಂಗಳೂರಿನ ಪ್ರಸಿದ್ಧ ತಾರಸಿ ಕೃಷಿಕ ಪಡ್ಡoಬೈಲ್ ಕೃಷ್ಣಪ್ಪ ಗೌಡರು ಶಾಲಾ ಆವರಣದಲ್ಲಿ ಗಿಡ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಶಾಲಾ ಸಂಚಾಲಕ ಜನಾಬ್ ಅಬ್ದುಲ್ ಅಝೀಜ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ನಿರ್ದೇಶಕ ಬದ್ರುದ್ದೀನ್ ವಹಿಸಿದ್ದರು. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಶೈಕ್ಷಣಿಕ ಸಲಹೆಗಾರ ಕೃಷ್ಣಪ್ರಸಾದ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದೀಪಿಕಾ ಚಾಕೋಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಜ್ಞಾನ ಶಿಕ್ಷಕಿ ಶಶಿಕಲಾ, 10ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅಫ್ರಾ ಹಾಗೂ 9 ನೇ ತರಗತಿ ವಿದ್ಯಾರ್ಥಿನಿ ಸಫಾ ಫಾತಿಮಾ ಪರಿಸರ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಸಭಾ ಕಾರ್ಯಕ್ರಮದ ಬಳಿಕ ತಾರಸಿ ಕೃಷಿ ಹಾಗೂ ಕೈ ತೋಟ ರಚನೆಯ ಬಗ್ಗೆ ಪಡ್ಡoಬೈಲು ಕೃಷ್ಣಪ್ಪ ಗೌಡರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
“ಗಿಡ ನೆಡುವ ಸಂಪ್ರದಾಯ ಮನೆಯಿಂದಲೇ ಆರಂಭವಾಗಲಿ, ಹೆತ್ತವರು ಮತ್ತು ಪೋಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವಂತಾಗಲಿ ” ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಕೃಷ್ಣಪ್ಪ ಗೌಡರನ್ನು ಶಾಲಾ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಶೈಕ್ಷಣಿಕ ಸಲಹೆಗಾರ ಕೃಷ್ಣಪ್ರಸಾದ್ ವಂದಿಸಿದರು. ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಸ್ವಾಗತಿಸಿ, ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.