ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಗೊನೆ ಮುಹೂರ್ತ

0

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಜೂ.11ರಿಂದ ಜೂ.13ರವರೆಗೆ ನಡೆಯಲಿರುವ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗೊನೆ ಮೂಹೂರ್ತವು ಕ್ಷೇತ್ರದಲ್ಲಿ ಜೂ.5ರಂದು ಬೆಳಿಗ್ಗೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರ
ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರ ಜನಾರ್ದನ ಆಚಾರ್ಯ, ಕೃಷ್ಣ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ ಸಂಜೀವ ರೈ ಪೈಕ, ಉಪಾಧ್ಯಕ್ಷ ಪ್ರದೀಪ್ ಬೊಬ್ಬೆಕೇರಿ, ಕೋಶಾಧಿಕಾರಿ ಭವಿಷ್ ಕರಿಮಜಲು, ರಾಜೇಶ್ ಕರಿಮಜಲು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here