ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ಸಿಐಟಿಯು ಬೀಡಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ

0

ಪುತ್ತೂರು: ಮಣಿಪುರದಲ್ಲಿ ಮೀಸಲಾತಿ ಹೆಸರಿನಲ್ಲಿ ಕೋಮುದಳ್ಳುರಿ, ಹಿಂಸೆ, ಕ್ರಿಶ್ಚಿಯನ್ನರ ಮೇಲೆ ದಾಳಿ, ಚರ್ಚುಗಳಿಗೆ ಬೆಂಕಿ ಇತ್ಯಾದಿ ಅಹಿತಕರ ಘಟನೆ ನಡೆಯುತ್ತಿದ್ದು, ಇದನ್ನು ತಡೆಯಲಾಗದ ಬಿಜೆಪಿ ಸರಕಾರವನ್ನು ವಜಾ ಮಾಡುವಂತೆ ಆಗ್ರಹಿಸಿ ಸಿಐಟಿಯು ಬೀಡಿ ಕಾರ್ಮಿಕರ ಸಂಘದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.

ಕಾರ್ಮಿಕ‌ ಮುಖಂಡ ನ್ಯಾಯವಾದಿ ಬಿ ಎಮ್ ಭಟ್ ಅವರು‌ ಪ್ರತಿಭಟನೆಯಲ್ಲಿ ಮಾತನಾಡಿದರು. ಸಿಐಟಿಯು ಮುಖಂಡ ಪಿ ಕೆ ಸತೀಶನ್, ಕಾರ್ಮಿಕ ಮುಖಂಡ ಈಶ್ವರಿ, ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷ ಗುಡ್ಡಪ್ಪ ಗೌಡ, ವೆಂಕಟ್ರಮಣ ಗೌಡ ಪಾಲ್ತಾಡಿ ಸಹಿತ ಹಲವಾರು ಮಂದಿ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here