ಪುತ್ತೂರು: ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ನಡೆಯಲಿರುವ 38ನೇ ವರುಷದ ಗಣೇಶೋತ್ಸವದ ಸಮಾಲೋಚನಾ ಸಭೆ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಗಣೇಶೋತ್ಸವ ಆಚರಣೆಯ ಬಗ್ಗೆ ಚರ್ಚಿಸಲಾಯಿತು. ಪ್ರತೀವರ್ಷದಂತೆ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಗಣೇಶೋತ್ಸವದ ಬಗ್ಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಸಲು ನಿರ್ಣಯಿಸಲಾಯಿತು. ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ತಿಳಿಸಿದರು.
ಕಾರ್ಯದರ್ಶಿ ಧನಂಜಯ ರೆಂಜ ಸ್ವಾಗತಿಸಿ ಅದ್ಯಕ್ಷ ಪ್ರಭಾಕರ ರೈ ಬಾಜುವಳ್ಳಿ ವಂದಿಸಿದರು. ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಳ್ಳಾಲ್, ಸಮಿತಿ ಕೋಶಾಧಿಕಾರಿ ರಂಜಿತ್ ತಲೆಪ್ಪಾಡಿ ಹಾಗೂ ಸಮಿತಿ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.