ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

0

ಪುತ್ತೂರು : ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 6 ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿರೂಪಕ, ನಾಟಕ ಕಲಾವಿದ, ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿ ಅದರ ಮಹತ್ವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿನಿಯರು ಪರಿಸರ ಗೀತೆಯನ್ನು ಹಾಡಿದರು.
ಮುಖ್ಯ ಶಿಕ್ಷಕಿ ಕಾರ್ಮಿನ್ ಪಾಯಸ್ ಸ್ವಾಗತಿಸಿ, ಶಿಕ್ಷಕ ಬೆನೆಟ್ ಮೊಂತೆರೊ ಅತಿಥಿಗಳ ಪರಿಚಯಿಸಿ. ಸ್ಕೌಟ್ಸ್ ಗೈಡ್ಸ್ ತಂಡದ ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು. ಎಲ್ಲಾ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here