ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ, ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆ ಸತತ 8ನೇ ಬಾರಿಗೆ ಶೇ.100 ಫಲಿತಾಂಶ

0

ಪುತ್ತೂರು: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಾರಾಗಿದ್ದ‌ ಇಬ್ಬರು ವಿದ್ಯಾರ್ಥಿಗಳು ಮರು ಮೌಲ್ಯ ಮಾಪನದಲ್ಲಿ ಉತ್ತೀರ್ಣರಾಗುವ ಮೂಲಕ ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, ಶಾಲೆಯು ಎಂಟನೇ ಬಾರಿಗೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಶಾಲೆಯಿಂದ ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 48 ವಿದ್ಯಾರ್ಥಿಗಳು ಉತ್ತೀರ್ಣರಾಗಿ 2 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಇಬ್ಬರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಪಡೆದುಕೊಳ್ಳುವ ಮೂಲಕ ಎಂಟನೇ ಬಾರಿಗೆ ಶೇ.100 ಫಲಿತಾಂಶ ಪಡೆದುಕೊಂಡಿದೆ. 9 ಮಂದಿ ವಿಶಿಷ್ಟ ಶ್ರೇಣಿ, 39 ಮಂದಿ ಪ್ರಥಮ ಶ್ರೇಣಿ ಹಾಗೂ 2 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಗುರು‌ನಾರಾಯಣ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here